ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಉದ್ದಟಿ ಗ್ರಾಮದ ಮನ್ನಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.
ಉದ್ದಟಿ ಗ್ರಾಮದ ಮನ್ನಾದ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸಂಪಿಗೇಶ್ವರ ದೇವಸ್ಥಾನದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ನಿಂತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ಶಶಿಕುಮಾರ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದಾಗ ವ್ಯಕ್ತಿಯ ಬಳಿ ಅಂದಾಜು ಮೌಲ್ಯ 8750ರೂ ಬೆಲೆಬಾಳುವ 175 ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ. ನಂತರ ಆತನನ್ನು ವಶಕ್ಕೆ ಪಡೆದು ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.





