Mysore
21
mist

Social Media

ಭಾನುವಾರ, 11 ಜನವರಿ 2026
Light
Dark

ವಿಮಾನ ದುರಂತ: 179 ಮಂದಿ ಸಾವು, ಇಬ್ಬರ ರಕ್ಷಣೆ

ಸಿಯೊಲ್‌: ದಕ್ಷಿಣ ಕೊರಿಯಾದ ʼಜೆಜು ಏರ್‌ʼ ವಿಮಾನ ಇಂದು ಬೆಳಿಗ್ಗೆ (ಭಾನುವಾರ) ಮುಯಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ 179 ಮಂದಿ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಯೊನ್ಹಾಪ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ವಿಮಾನವು ನಿಲ್ದಾಣದಲ್ಲಿ ಇಳಿಯುವ ವೇಳೆ ಲ್ಯಾಂಡಿಂಗ್‌ ಗೇರ್‌ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಕಾರಣ ರನ್‌ ವೇನಲ್ಲಿ ಜಾರಿದ ವಿಮಾನ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡಿದೆ. ಬ್ಯಾಂಕಾದ್‌ ನಿಂದ ಬರುತ್ತಿದ್ದ ವಿಮಾನದಲ್ಲಿದ್ದ 175 ಪ್ರಯಾಣಿಕರು, 6 ಮಂದಿ ಸಿಬ್ಬಂದಿ ಸೇರಿ ಒಟ್ಟು 181 ಜನರಿದ್ದರು. ಇದರಲ್ಲಿ 179 ಮಂದಿ ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ದಕ್ಷಿಣ ಕೊರಿಯಾದ ಸರ್ಕಾರ ಸಂತಾಪ ವ್ಯಕ್ತಪಡಿಸಿದೆ. ದಕ್ಷಿಣ ಕೊರಿಯಾದ ಹಂಗಾಮಿ ಅಧ್ಯಕ್ಷ ಚೋಯ್‌ ಸಾಂಗ್‌-ಮೊಕ್‌ ಸಮ್ಮುಖದಲ್ಲಿ ತುರ್ತು ಸಭೆ ನಡೆಸಿದ್ದು, ಡಿಸೆಂಬರ್‌ 29ರಿಂದ ಜನವರಿ 4 ರವರೆಗೆ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದಾರೆ.

Tags:
error: Content is protected !!