Mysore
15
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

‘ಬಲರಾಮನ ದಿನಗಳು’ ಚಿತ್ರದಲ್ಲಿ ಪ್ರಿಯಾ ಆನಂದ್

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿ ಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿದ್ದಾರೆ.ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸು ತ್ತಿರುವ ಹಾಗೂ ‘ಆ ದಿನಗಳು’ ಖ್ಯಾತಿಯ ಕೆ. ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಬಲರಾಮನ ದಿನಗಳು’.

ಇದು ವಿನೋದ್ ಪ್ರಭಾಕರ್ ಅಭಿನಯದ ೨೫ನೇ ಚಿತ್ರವೂ ಹೌದು. ಈ ಚಿತ್ರಕ್ಕೆ ಇದೀಗ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

‘ಬಲರಾಮನ ದಿನಗಳು’ ೧೯೮೦ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಹುಟ್ಟುಹಬ್ಬಕ್ಕೆ ಅದರ ಮೊದಲ ನೋಟ ಬಿಡುಗಡೆಯಾಗಿತ್ತು. ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ ೫೧ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ ೧೫ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

Tags:
error: Content is protected !!