Mysore
23
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

ನಮ್ಮ ಪಕ್ಷ ಮುಗಿಸಲೆಂದೇ ಆಪರೇಷನ್‌ ಹಸ್ತ ನಡೆಯುತ್ತಿದೆ: ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಜೆಡಿಎಸ್‌ ಮುಗಿಸಬೇಕು ಅಂತಲೇ ಆಪರೇಷನ್‌ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕರಿಂದ ಆಪರೇಷನ್‌ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಹಸ್ತ ವರ್ಕೌಟ್‌ ಆಗಲ್ಲ. ನಮ್ಮ ಪಕ್ಷದ ಯಾವ ಶಾಸಕರು ಕೂಡ ಕಾಂಗ್ರೆಸ್‌ಗೆ ಹೋಗುವ ಪರಿಸ್ಥಿತಿ ಬಂದಿಲ್ಲ. ಕಾಂಗ್ರೆಸ್‌ನವರು ಏನೇನು ಮಾಡುತ್ತಿದ್ದಾರೆ ಗೊತ್ತಿದೆ. ದೇವರೇ ಅವರಿಗೆಲ್ಲಾ ಶಿಕ್ಷೆ ಕೊಡುತ್ತಾನೆ ಎಂದು ನಾನು ಸುಮ್ಮನಿದ್ದೇನೆ ಎಂದರು.

ಇನ್ನು ರಾಜ್ಯದಲ್ಲಿ ಡಿಸೆಂಬರ್.‌5ರಿಂದ ಬಸ್‌ ಪ್ರಯಾಣ ದರ ಏರಿಕೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಬೆಲೆ ಏರಿಕೆಗೆ ಸಿದ್ಧರಾಗಿ ಎಂದು ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಹಲವಾರು ಬಾರಿ ಬೆಲೆ ಏರಿಕೆ ಮಾಡಿದೆ. ಈ ಬಗ್ಗೆ ಜನರು ಕೂಡ ಒಂದೆರಡು ದಿನ ವಿರೋಧಿಸಿ ಅಮೇಲೆ ಎಲ್ಲವನ್ನೂ ಮರೆತುಬಿಡುತ್ತಾರೆ. ರಾಜ್ಯದಲ್ಲಿ ಸರ್ಕಾರ ಇದೆ ಅನ್ನೋದೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.

Tags:
error: Content is protected !!