Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯದಲ್ಲಿ ಎಸ್‌.ಎಂ ಕೃಷ್ಣಗೆ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ; ಎನ್.ಚಲುವರಾಯಸ್ವಾಮಿ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ.

ಸರ್ಕಾರಿ ನಿವಾಸ 7 ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಜನಪ್ರಧಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜೊತೆಗಿನ  ಶ್ರದ್ಧಾಂಜಲಿ ಪೂರ್ವಭಾವಿ ಸಭೆ ನಡೆಯಿತು.

ಎಸ್.ಎಂ.ಕೃಷ್ಣ ಅವರಿಗೆ ಭಾವ ನಮನ, ಗೀತ ನಮನ, ಚಿತ್ರ ನಮನ, ಪುಷ್ಪ ನಮನ ಹಾಗೂ ದೀಪ ನಮನ ಒಳಗೊಂಡಂತೆ ಐದು ರೂಪದಲ್ಲಿ ನಮನ ಸಲ್ಲಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಡಿಸಿಎಂ ಜೊತೆ ಚರ್ಚಿಸಿ ದಿನಾಂಕ ನಿಗದಿ

ಈ ವೇಳೆ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ, ಹಿರಿಯ ರಾಜಕಾರಣಿ, ಧೀಮಂತ ನಾಯಕರು, ಅಭಿವೃದ್ಧಿಯ ಹರಿಕಾರರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ತೀರ್ಮಾನಿಸಲಾಗಿದೆ. ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯ ಈ ಕಾರ್ಯಕ್ರಮಕ್ಕೆ ಸಂಚಾಲಕರನ್ನಾಗಿ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

 

ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ, ವಿಧಾನಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಮಾಜಿ ಶಾಸಕರುಗಳಾದ ಶಿವರಾಮೇಗೌಡ, ಕೆ.ಬಿ.ಚಂದ್ರಶೇಖರ್, ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ, ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಯಪ್ರಕಾಶ್ ಗೌಡ, ಸತ್ಯಾನಂದ, ರಾಮು, ಅಮರನಾಥಗೌಡ, ಎನ್.ಎಸ್.ರಮೇಶ್ ಸೇರಿದಂತೆ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಉಪಸ್ಥಿತರಿದ್ದರು.

Tags:
error: Content is protected !!