Mysore
24
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಪ್ರೊ.ಮುಜಾಫರ್‌ ಅಸ್ಸಾದಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್‌ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್‌ ಅಸ್ಸಾದಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರು ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು ಎಂದು ತಿಳಿಸಿದ್ದಾರೆ.

ಅಸ್ಸಾದಿ ಅವರ ಅಗಲಿಕೆಯಿಂದ ನಾಡು ಬಡವಾಗಿದೆ. ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ. ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯವಾಗಿದ್ದರು.

ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!