ಮಂಗಳೂರು: ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧರಲ್ಲಿ ಬೆಂಕಿಯು ಕಾರನ್ನು ಸುತ್ತುವರಿದಿದೆ.
ಕಾರಿನಲ್ಲಿ ಒಬ್ಬರೆ ಚಲಿಸುತ್ತಿದ್ದು, ಅದೃಷ್ಟವಶಾತ್ ಸುರಕ್ಷಿತವಾಗಿ ಕಾರಿನಿಂದ ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಳಿಕ ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.





