Mysore
27
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು(ಜನವರಿ.5) ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದಿದ್ದಾರೆ.

ಕೆಲ ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ದೇಶದ ಮತ್ತು ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ಅನೇಕ ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಹೀಗಾಗಿ ಇದರಿಂದಲೇ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದು ಹೇಳಿದ್ದಾರೆ.

ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತಿ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರವಾಗಿದೆ. ಈ ಸಂವಿಧಾನ ಇರುವುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದಿದ್ದಾರೆ.

ಇನ್ನೂ ನಮ್ಮ ಸರ್ಕಾರ ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಕೌಶಲ್ಯ ತರಬೇತಿಯನ್ನೂ ನೀಡುತ್ತಿದ್ದೇವೆ. ಅದಕ್ಕಾಗಿ 213 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Tags:
error: Content is protected !!