Mysore
32
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು : ರಾಯಚೂರಲ್ಲಿ ಮತ್ತೊಂದು ಘಟನೆ

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಬಾಣಂತಿಯ ಹೆಸರು ಸರಸ್ವತಿ (24) ಎಂದು ಗುರುತಿಸಲಾಗಿದ್ದು, ಈಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ತಿಳಿದುಬಂದಿದೆ.

ಜ.2 ರಂದು ಗರ್ಭಿಣಿ ಸರಸ್ವತಿಗೆ ಹೊಟ್ಟೆ ನೋವಿನ ಕಾರಣ ಜಿಲ್ಲೆಯ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಸಿಸೇರಿಯನ್‌ ಹೆರಿಗೆಯ ಮೂಲಕ ನಾಲ್ಕನೇ ಮಗುವಿಗೆ ಜನ್ಮ ನೀಡಿದ ಸರಸ್ವತಿ, ಜ.5 ರಂದು ಅಧಿಕ ರಕ್ತದೊತ್ತಡದಿಂದ ಮೃತಪಟ್ಟಿದ್ದಾರೆ. ಸದ್ಯ ಶಿಶುವಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸರಸ್ವತಿ ಸಾವಿನಿಂದ ಕುಟುಂಬ ಕಂಗಲಾಗಿದ್ದಾರೆ.

ಜಿಲ್ಲೆಯಲ್ಲಿ ಕಳೆದ 4 ತಿಂಗಳಿಂದ ಒಟ್ಟು 12 ಬಾಣಂತಿಯರು ಮೃತಪಟ್ಟಿದ್ದಾರೆ.

Tags:
error: Content is protected !!