Mysore
18
broken clouds

Social Media

ಗುರುವಾರ, 01 ಜನವರಿ 2026
Light
Dark

ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.

8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ.

ತೇಜಸ್ವಿನಿ ಇಂದು ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್‌ ತೋರಿಸುವ ವೇಳೆ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಜೆಎಸ್‌ಎಸ್‌ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆಗೆ ಕರೆ ತರುವಷ್ಟರಲ್ಲಿಯೇ ತೇಜಸ್ವಿನಿ ಮೃತ ಪಟ್ಟಿದ್ದಾಳೆ.

ಈ ವೇಳೆ ಪರಿಶೀಲನೆ ನಡೆಸಿದ ವೈದ್ಯರು ಹೃದಯಘಾತದಿಂದ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಈ ವೇಳೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!