ಮೈಸೂರು: ಪ್ರಗತಿ ಪರ ಸಂಘಟನೆಗಳು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಬೆಂಬಲ ಸೂಚಿಸಿವೆ. ಹಾಗಾಗಿ ನಗರ ಬಸ್ ನಿಲ್ದಾಣಗಳಲ್ಲಿ ಬಸ್ ಇಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ.
ಮೈಸೂರಿನಲ್ಲಿ ಇಂದು(ಜನವರಿ.7) ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ವಿರೋಧಿಸಿ ಮೈಸೂರು ಬಂದ್‌ಗೆ ಕರೆ ನೀಡಲಾಗಿದೆ. ಈ ಬೆನ್ನಲ್ಲೇ ಸಾರಿಗೆ ಬಸ್‌ಗಳು ಸಹ ಮೈಸೂರು ಬಂದ್‌ಗೆ ಬೆಂಬಲ ನೀಡಿದ್ದು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ಪರದಾಟಪಡುವಂತಾಗಿದೆ.
ಮೈಸೂರು ಬಂದ್ ಹಿನ್ನೆಲೆಯಲ್ಲಿ ನಗರ ಬಸ್ ನಿಲ್ದಾಣದಲ್ಲಿ ಬಸ್ ವ್ಯವಸ್ಥೆಯಿಲ್ಲದೇ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಯಾಣಿಕರು ಬಸ್‌ಗಾಗಿ ಗಂಟೆ ಗಟ್ಟಲೇ ಕಾದು ಕಾದು ಸುತ್ತಾಗಿದ್ದಾರೆ. ಅಲ್ಲದೇ ಮೈಸೂರು ಬಂದ್ ಎಫೆಕ್ಟ್ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ.





