Mysore
25
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ನಕ್ಸಲರ ಶರಣಾಗತಿ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದ ಬಿಜೆಪಿಯ ಸುನೀಲ್‌

ಬೆಂಗಳೂರು: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನೀಲ್‌ ಕುಮಾರ್‌ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸುನೀಲ್‌ ಕುಮಾರ್‌, ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Tags:
error: Content is protected !!