Mysore
26
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಲೈಂಗಿಕ ದೌರ್ಜನ್ಯ ಪ್ರಕರಣ: ಜಪ್ತಿ ಮಾಡಿದ್ದ ವಿಡಿಯೋ, ಫೋಟೋ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್‌ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತು ಇಂದು(ಜನವರಿ.10) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತಮಗೆ ಫೋಟೋ ಮತ್ತು ವಿಡಿಯೋ ಯಾಕೆ ಎಂದು ಪ್ರಶ್ನಿಸಿದೆ. ಅಲ್ಲದೇ ಎಸ್‌ಐಟಿ ಅಧಿಕಾರಿಗಳ ಪರ ವಕೀಲ ಎಸ್‌ಪಿಪಿ ಜಗದೀಶ್‌ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜನವರಿ.16ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಹೈಕೋರ್ಟ್‌ಗೆ ಪ್ರಜ್ವಲ್‌ ಅರ್ಜಿ ಏನು?

ಲೈಂಗಿಕ ದೌರ್ಜನ್ಯ ಕೇಸ್‌ನ ಅಡಿಯಲ್ಲಿ ಆರು ತಿಂಗಳಿನಿಂದ ನ್ಯಾಯಾಂಗ ಬಂಧನವಾಗಿರುವ ಪ್ರಜ್ವಲ್‌, ತಮ್ಮ ವಿರುದ್ಧದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಹಾಗೂ ಫೋಟೋಗಳನ್ನು ಹಿಂತಿರುಗಿಸಬೇಕೆಂದು ತಮ್ಮ ಪರ ವಕೀಲರಿಂದ ಮನವಿ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

 

 

Tags:
error: Content is protected !!