ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಯೇ ನವದೆಹಲಿಯ 23 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವನ್ನು ಇ-ಮೇಲ್ ಮೂಲಕ ಕಳುಹಿಸಿದ್ದಾನೆ ಬಂದು ಬಹಿರಂಗಪಡಿಸಿದ್ದಾರೆ.
ಇತ್ತೀಚಿಗೆ ಕೆಲವು ತಿಂಗಳಿನಿಂದ ದೆಹಲಿಯ ಹಲವು ಶಾಲೆಗಳಿಗೆ ಸರಣಿ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬರುತ್ತಿದ್ದು, ಇದು ದೆಹಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ ಇದೀಗ ಮೂಲ ಪತ್ತೆ ಹಚ್ಚಿರುವ ಪೊಲೀಸರಿಗೆ ಶಾಕ್ ಆಗಿದೆ. ಏಕೆಂದರೆ ಬಂಧನವಾರುವ ವಿದ್ಯಾರ್ಥಿಯೇ, ತಾನು ಪರೀಕ್ಷೆಯಿಂದ ತಪ್ಪಿಸಿಕೊಳ್ಳಲೆಂದು ದೆಹಲಿಯಲ್ಲಿರುವ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವನ್ನು ಇ-ಮೇಲ್ ಮೂಲಕ ರವಾನಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದೇನೆ. ಹೀಗಾಗಿ ಈ ಬಗ್ಗೆ ದೆಹಲಿಯ ಡಿಎಸ್‌ಪಿ ಅಂಕಿತ್ ಚೌಹಾಣ್ ಮಾಹಿತಿ ನೀಡಿದ್ದಾರೆ.
ಮದರ್ಸ್ ಇಂಟರ್ ನ್ಯಾಷನಲ್ ಸ್ಕೂಲ್, ಮಾಡರ್ನ್ ಸ್ಕೂಲ್, ಸ್ಪ್ರಿಂಗ್‌ಡೇಲ್ ಸ್ಕೂಲ್, ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್, ಸೇಂಟ್ ಕೊಲಂಬಾಸ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್ ಸೇರಿದಂತೆ 23 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಯೂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.





