Mysore
18
scattered clouds

Social Media

ಶನಿವಾರ, 31 ಜನವರಿ 2026
Light
Dark

ಗಾಂಜಾ ಮಾರಾಟ: ಆರೋಪಿಗಳ ಬಂಧನ

ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು.
ಶನಿವಾರ ಬಸವನತ್ತೂರು ಗ್ರಾಮದ ಸರ್ಕಾರಿ ಶಾಲೆಯ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು, ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರಿಂದ ೮೦ ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಸೋಮವಾರಪೇಟೆ ಉಪವಿಭಾಗ ಡಿಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ಸಿಪಿಐ ರಾಜೇಶ್.ಕೆ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಮೋಹನ್‌ರಾಜು.ಪಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:
error: Content is protected !!