Mysore
24
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು

ಬೆಂಗಳೂರು: ತಡರಾತ್ರಿ ಕಿಡಿಗೇಡಿಗಳು ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.

ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.

ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಾಮರಾಜಪೇಟೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಒಟ್ಟು 8 ಹಸುಗಳನ್ನು ಸಾಕಿರುವ ಕರ್ಣ ಪ್ರತಿ ದಿನ ಅವುಗಳನ್ನು ಆರೈಕೆ ಮಾಡುತ್ತಾರೆ. ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗುತ್ತದೆ. ಹೀಗೆ ನಿನ್ನೆ ಮಲಗಿದ್ದ ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದಿದ್ದಾರೆ.

ಮಾಹಿತಿ ತಿಳಿದು ಇಂದು ಬೆಳಿಗ್ಗೆ ಕಾಟನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಘಟನಾ ಸ್ಥಳಕ್ಕೆ ಸಂಸದ ಪಿ.ಸಿ.ಮೋಹನ್‌ ಕೂಡ ಭೇಟಿ ನೀಡಿ ಕರ್ಣ ಅವರ ಕುಟುಂಬಕ್ಕೆ ಸಮಾಧಾನ ಹೇಳಿದ್ದಾರೆ.

ಇನ್ನು ಮೂಕ ಪ್ರಾಣಿಗಳ ಕೆಚ್ಚಲು ಕೊಯ್ದ ಘಟನೆ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

 

Tags:
error: Content is protected !!