ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಆದರೆ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಪರ ಸಂಘಟನೆಗಳು ಈ ಘಟನೆಯನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದರು.
ಇನ್ನು ಜಾತಿಗಣತಿ ವರದಿ ಜಾರಿ ವಿರೋಧ ಕುರಿತು ಮಾತನಾಡಿದ ಅವರು, ಜಾತಿಗಣತಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿರುವ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಚಿವ ಸಂಪುಟದಲ್ಲಿ ಮಂಡಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.





