Mysore
23
clear sky

Social Media

ಬುಧವಾರ, 22 ಏಪ್ರಿಲ 2026
Light
Dark

ಸಚಿವರು, ಶಾಸಕರಿಗೆ ಶಿಸ್ತಿನ ಪಾಠ ಮಾಡಿದ ಸುರ್ಜೇವಾಲ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕಾಂಗ್ರೆಸ್‌ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಹಾಗೂ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರಕ್ಕಿಂತ ಪಕ್ಷ ದೊಡ್ಡದಾಗಿದೆ ಎಂದರು.

ಪಕ್ಷ ಒಗ್ಗಟ್ಟಾಗಿದ್ದಾಗ ಮಾತ್ರ ಯಾವ ರಾಜ್ಯದಲ್ಲಾದರೂ ಸರ್ಕಾರವನ್ನು ರಚಿಸಲು ಸಾಧ್ಯ. ಹೀಗಾಗಿ ಯಾವುದೇ ಕಾರಣಕ್ಕೂ ಸಚಿವರಾಗಲಿ ಅಥವಾ ಶಾಸಕರಾಗಲಿ ಪಕ್ಷಕ್ಕೆ ಹಾನಿಯಾಗುವಂತಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿದರು.

ಇನ್ನೂ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಲ್ಲಿ ನಾಯಕತ್ವದ ಸಂಘರ್ಷ ಇದೆ. ಆದರೆ ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆಗಳಿಲ್ಲ. ಮುಂದಿನ ದಿನಗಳಲ್ಲಿಯೂ ಗುಂಪುಗಾರಿಕೆ ಆಗುವುದು ಬೇಡ. ಸಚಿವರು ಹಾಗೂ ಶಾಸಕರು ರಾಜ್ಯದಲ್ಲಿ ನ್ಯಾಯಯುತವಾಗಿ ಆಡಳಿತ ನಡೆಸಿ ಎಂದು ಹೇಳಿದರು.

Tags:
error: Content is protected !!