Mysore
15
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ರಾಜ್ಯದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48.91 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಆದರೆ ಕೇಂದ್ರದಿಂದ ಬೆಂಬಲ ಬೆಳೆಯೊಂದಿಗೆ ಕೇವಲ 1.5 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವರು ಎನ್.ಚಲುವರಾಯಸ್ವಾಮಿರವರು 2024ರ ಡಿಸೆಂಬರ್‌ 13 ರಂದ ಪತ್ರ ಬರೆದು ಮನವಿ ಮಾಡಿದ್ದರು.

ಇದಕ್ಕೆ ಸ್ಪಂದನೆ ನೀಡಿರುವ ಕೇಂದ್ರ ಆಹಾರ ಮತ್ತು ಗ್ರಾಹರಕರ ವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣೆ ಮತ್ತು ಹೊಸ ನವೀಕರಿಸಬಹುದಾದ ಇಂಧನ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿರವರಿಗೆ ನಿರ್ದೇಶನ ನೀಡಿದೆ.

 

Tags:
error: Content is protected !!