Mysore
25
heavy intensity rain

Social Media

ಶುಕ್ರವಾರ, 29 ಮೇ 2026
Light
Dark

ಸಚಿವೆ ಹೆಬ್ಬಾಳಕರ ಕಾರು ಅಪಘಾತ: ತಪ್ಪಿದ ದುರಂತ

ಬೆಳಗಾವಿ:  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ 5 ವೇಳೆಗೆ ಅಪಘಾತ ಸಂಭವಿಸಿದ್ದು, ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಘಟನೆ ಜರುಗಿದೆ.
ಸಚಿವೆ ಪ್ರಾಯಾಣಿಸುತ್ತಿದ್ದ ಕಾರು ಮರಕ್ಕೆ ಗುದ್ದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸಚಿವೆ ಹೆಬ್ಬಾಳಕರ್‌ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಾಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವುದು ತಿಳಿದುಬಂದಿದೆ.
ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದು, ಸಚಿವೆ ಸೇರಿದಂತೆ ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Tags:
error: Content is protected !!