ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರಿಗಮ ವಿಜಿ ಇಂದು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ನಾಳೆ ಚಾಮರಾಜಪೇಟೆಯಲ್ಲಿ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸರಿಗಮ ವಿಜಿ ಅವರು ಭಾರತೀಯ ನಟ, ಬರಹಗಾರ ಮತ್ತು ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿ ಕಲಾವಿದರೂ ಆಗಿ ಕೂಡ ತಮ್ಮ ಛಾಪು ಮೂಡಿಸಿದ್ದಾರೆ.
ವಿಜಿ ಅವರು ನಟನಾಗಿ ನಟಿಸಿದ್ದ ಚೊಚ್ಚಲ ಚಲನಚಿತ್ರ ಬೆಳುವಲದ ಮಡಿಲಲ್ಲಿ. 2018ರ ಹೊತ್ತಿಗೆ ವಿಜಿ ಅವರು ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.