Mysore
30
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಮೈಸೂರು ಇನ್ಫೋಸಿಸ್ | ಸಿಗದ ಚಿರತೆ ; ಸೆರೆ ಕಾರ್ಯಚರಣೆ ಸ್ಥಗಿತ

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ.

ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚಿಸಿತ್ತು. ಬಳಿಕ ಅರಣ್ಯ ಇಲಾಖೆಯು ತಂಡ ರಚಿಸಿಕೊಂಡು ಕಾರ್ಯಚರಣೆ ನಡೆಸಿಸುತ್ತಿತ್ತು. ಚಿರತೆ ಕಾರ್ಯಚರಣೆಗೆ ಅಲ್ಲಲ್ಲಿ ಕ್ಯಾಮಾರ, ಡ್ರೋನ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ, 10 ದಿನವಾದರೂ ಚಿರತೆಯ ಹೆಚ್ಚೆ ಗುರುತು ಎಲ್ಲೂ ಕಾಣಿಸಿಲ್ಲ. ಇದರ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ, ಅರಣ್ಯ ಇಲಾಖೆಯು ತನ್ನ ಕಾರ್ಯಚರಣೆಯನ್ನು ನಿಲ್ಲಿಸಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.

ಇಂತಹ ಪ್ರಕರಣಗಳು ಮರುಕಳಿಸದಂತೆ ಇನ್ಛೋಸಿಸ್ ಕ್ಯಾಂಪಸ್ ಅನ್ನು ಬಲವರ್ಧನೆಗೊಳಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದೇವೆ. ಜತೆಗೆ, ರಾತ್ರಿ ವೇಳೆ ಥರ್ಮಲ್ ಡ್ರೋಣ್ ಬಳಸಿ ಕ್ಯಾಂಪಸ್‌ನಲ್ಲಿ ನಿರಂತರ ನಿಗಾವಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!