ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಕರೀನಾ ಕಪೂರ್ ಹಾಗೂ ಇಬ್ಬರು ಮಕ್ಕಳು ಸೇಫ್ ಆಗಿದ್ದಾರೆ.
ಇನ್ನು ಘಟನೆ ನಡೆಯುತ್ತಿದ್ದಂತೆ ಸೈಫ್ ಅಲಿ ಖಾನ್ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.





