Mysore
27
overcast clouds

Social Media

ಶನಿವಾರ, 18 ಜುಲೈ 2026
Light
Dark

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: ನಾಲ್ವರು ಶಂಕಿತರ ಬಂಧನ

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದ್ದು, ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ.

ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಕರೀನಾ ಕಪೂರ್‌ ಹಾಗೂ ಇಬ್ಬರು ಮಕ್ಕಳು ಸೇಫ್‌ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಘಟನೆ ನಡೆಯುತ್ತಿದ್ದಂತೆ ಸೈಫ್‌ ಅಲಿ ಖಾನ್‌ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಪ್ರಕರಣ ಸಂಬಂಧ ನಟ ಸೈಫ್‌ ಅಲಿ ಖಾನ್‌ ಮೇಲೆ ದಾಳಿ ನಡೆಸಿರುವ ಆರೋಪದ ಮೇಲೆ ನಾಲ್ವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

 

Tags:
error: Content is protected !!