Mysore
23
overcast clouds

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

ಕಾಂಗ್ರೆಸ್‌ ಶಾಸಕನ ಕಾರು ಡಿಕ್ಕಿ: ಇಬ್ಬರು ಓಂ ಶಕ್ತಿ ಮಾಲಾಧಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿ ಇಬ್ಬರು ಓಂ ಶಕ್ತಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ.

ಬೇಗೂರು ಗ್ರಾಮದ ಬಿಂದು, ರಂಗಮ್ಮ ಎಂಬುವವರು ಗಂಭೀರ ಗಾಯಗೊಂಡಿದ್ದು, ಸದ್ಯ ಅವರಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಶಾಸಕ ವಿರೇಂದ್ರ, ಚಾಲಕ ಸೇರಿ ಮೂವರು ಕಾರಿನಲ್ಲಿದ್ದರು ಎನ್ನಲಾಗಿದೆ.

ಶಾಸಕರ ಕಾರು ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!