Mysore
22
broken clouds

Social Media

ಸೋಮವಾರ, 25 ಮೇ 2026
Light
Dark

ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಮದುವೆ ಆಮಂತ್ರಣ ಪತ್ರ ನೀಡಿದ ನಟ ಡಾಲಿ ಧನಂಜಯ್‌

ಮೈಸೂರು: ನಟ ಡಾಲಿ ಧನಂಜಯ್‌ ಅವರಿಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮದುವೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಶ್ರೀಯುತ ಧನಂಜಯ ಅವರು, ಇಂದು ನಮ್ಮ ಕಛೇರಿಗೆ ಆಗಮಿಸಿ ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ, ತಮ್ಮ ಮದುವೆ ಸಮಾರಂಭಕ್ಕೆ ಆಹ್ವಾನಿಸಿದರು.

ಹೊಸ ಜೀವನಕ್ಕೆ ಕಾಲಿಡುತ್ತಿರುವ ನವ ಜೋಡಿಗೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಅನುಗ್ರಹಿಸಲಿ ಎಂದು ಶುಭಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!