Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ಪ್ಲಾಸ್ಟಿಕ್‌ ತ್ಯಾಜ್ಯ ಕಾನನ ಪ್ರವೇಶಿಸದಂತೆ 2 ಹಂತದ ತಪಾಸಣೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ವನ್ಯ ಜೀವಿಗಳ  ಪ್ರಾಣಕ್ಕೆ ಕುತ್ತು ತರುವ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ಪ್ರವೇಶದಲ್ಲೇ ತಡೆಯಲು 2 ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಇಂದು ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಾಗರಹೊಳೆ, ಮೇಟಿಕುಪ್ಪೆ, ಕಲಹಳ್ಳ ಮತ್ತು ವೀರನಹೊಸಹಳ್ಳಿ ವಲಯಗಳ ಚೆಕ್ ಪೋಸ್ಟ್ ಗಳಲ್ಲಿ ಬೃಹತ್ ಗಾತ್ರದ ತ್ಯಾಜ್ಯ ಬುಟ್ಟಿಗಳನ್ನು ಇಡಲಾಗಿದ್ದು, ಪ್ರತಿ ಕಸದ ಬುಟ್ಟಿಗಳಲ್ಲಿ ನಿತ್ಯ 5-6 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತದೆ. ಜೊತೆಗೆ ಸಿಬ್ಬಂದಿ ಅರಣ್ಯದೊಳಗೆ ಹೋಗಿ ತ್ಯಾಜ್ಯ ಸಂಗ್ರಹಿಸಿ ತರುತ್ತಾರೆ. ಅದರ ಬದಲು ಪ್ರವೇಶದಲ್ಲೇ 2 ಹಂತದ ತಪಾಸಣೆ ಜಾರಿ ಮಾಡಿ ಎಂದರು.

ಅರಣ್ಯದೊಳಗೆ ಹಾದು ಹೋಗುವ ಹೆದ್ದಾರಿಗಳಲ್ಲಿ, ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ 2 ಹಿಂಬತದ ತಪಾಸಣೆ ವ್ಯವಸ್ಥೆ ಜಾರಿ ಮಾಡಿ, ಮೊದಲ ಹಂತದಲ್ಲಿ ಒಂದು ದೊಡ್ಡ ಬುಟ್ಟಿ ಇಟ್ಟು ಏಕ ಬಳಕೆ ಪ್ಲಾಸ್ಟಿಕ್ ಬಾಟಲಿ, ಲೋಟ, ತಟ್ಟೆ, ಕ್ಯಾರಿ ಬ್ಯಾಗ್ ಅನ್ನು ಅದರಲ್ಲಿ ಸ್ವಯಂ ಪ್ರೇರಿತವಾಗಿ ಹಾಕಲು ವಾಹನದಲ್ಲಿರುವವರಿಗೆ ತಿಳಿಸಿ. ನಂತರ ಎರಡನೇ ಹಂತದಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಇದ್ದರೆ ದಂಡ ವಿಧಿಸಿ ಎಂದು ಸೂಚಿಸಿದರು.

ಮಾನವ-ವನ್ಯ ಜೀವಿ ಸಂಘರ್ಷ ಹೆಚ್ಚಾಗುತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು, ಚಿರತೆಗಳು ನಾಡಿಗೆ ಬರುತ್ತಿವೆ. ಆನೆಗಳೂ ಕಾಡಿನಿಂದ ಹೊರಬರುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯದೊಳಗೆ ನೀರು ಮತ್ತು ಆಹಾರದ ಕೊರತೆ ಆಗದಂತೆ ಯೋಜನೆ ರೂಪಿಸಿ ಎಂದು ತಿಳಿಸಿದರು.

ರಂಗನತಿಟ್ಟು ಪಕ್ಷಿಧಾಮದಲ್ಲಿ ಆನ್ ಲೈನ್ ಮೂಲಕ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಜಾರಿ ಮಾಡುವಂತೆಯೂ ಸೂಚಿಸಿದರು.

Tags:
error: Content is protected !!