Mysore
27
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಮೈಸೂರು ಕೇಂದ್ರ ಕಾರಾಗೃಹ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್‌ ಭಟ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಕೇಂದ್ರ ಕಾರಗೃಹಕ್ಕೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್‌ ಭಟ್‌ ಅವರು ಇಂದು ದಿಢೀರ್‌ ಭೇಟಿ ನೀಡಿ ಖೈದಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಇಲ್ಲಿನ ಕಾರಾಗೃಹದಲ್ಲಿ ಮೂವರು ಖೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಇಂದು(ಜನವರಿ.20) ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್‌ ಭಟ್‌ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವೇಳೆ ಶ್ಯಾಮ್‌ ಭಟ್‌ ಅವರಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವೆಂಟಿಗೋಡಿ ಸಾಥ್‌ ನೀಡಿದ್ದಾರೆ. ಇನ್ನೂ ಕಾರಾಗೃಹದ ಅಧೀಕ್ಷಕ ಪಿ.ಎಸ್‌.ರಮೇಶ್‌ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಅಧ್ಯಕ್ಷರನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಇದೇ ಸಂದರ್ಭದಲ್ಲಿ ಶ್ಯಾಮ್‌ ಭಟ್‌ ಅವರೊಂದಿಗೆ ಜೈಲಿನ ಕುಂದು ಕೊರತೆಗಳ ಕುರಿತು ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

Tags:
error: Content is protected !!