Mysore
18
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ.

ಗಣೇಶ್‌ ಹಾಗೂ ಶರವಣ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರು ಕೆ.ಆರ್.‌ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲೆಂದು ಕೆ.ಆರ್‌.ಮಾರ್ಕೆಟ್‌ ಬಳಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ, ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಬಳಿಕ ಸಂತ್ರಸ್ತ ಮಹಿಳೆ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ಇಬ್ಬರು ಕಾಮುಕರನ್ನು ಹೆಡೆಮುರಿ ಕಟ್ಟಿದ್ದಾರೆ.

 

Tags:
error: Content is protected !!