Mysore
22
broken clouds

Social Media

ಗುರುವಾರ, 13 ಮಾರ್ಚ್ 2025
Light
Dark

ಮೈಕ್ರೋ ಫೈನಾನ್ಸ್‌ ಕಿರುಕುಳ: ರಾಜ್ಯದಲ್ಲಿ ಶೀಘ್ರವೇ ಬಲಿಷ್ಠ ಕಾನೂನು ಜಾರಿ

ವಿಜಯಪುರ: ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಜನವರಿ.25) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿನ್ನೆಲೆಯಲ್ಲಿ ಇಂದು ಕೃಷ್ಣ ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಫೈನಾನ್ಸ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬಲಿಷ್ಠ ಕಾನೂನು ತರುವಂತೆ ಸ್ಷಷ್ಟವಾಗಿ ಸೂಚಿಸಿದ್ದಾರೆ. ಹೀಗಾಗಿ ಫೈನಾನ್ಸ್‌ ಕಂಪೆನಿಗಳನ್ನು ಮಟ್ಟ ಹಾಕಲು ಮುಂದಿನ ದಿನಗಳಲ್ಲಿ ಬಲಿಷ್ಠ ಕಾನೂನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಹಲವು ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಕುರಿತು ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದೊಂದು ಗಂಭೀರ ವಿಷಯವಾಗಿದೆ ಎಂದರು.

ಸಿಬಿಐ ಬಿಜೆಪಿಯ ಅಂಗ ಸಂಸ್ಥೆಯಾ?

ಇದೇ ಸಂದರ್ಭದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ವಿಚಾರವಾಗಿ ಬಿಜೆಪಿಯವರ ಟೀಕೆ ಬಗ್ಗೆ ಮಾತನಾಡಿದ ಅವರು, ಬಜೆಪಿಯವರಿಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ನಂಬಿಕೆ ಇಲ್ಲವೇ? ಸಿಬಿಐಗೆ ತನಿಖೆ ವಹಿಸಿ ಎಂದರೆ ಏನಾರ್ಥ? ಸಿಬಿಐ, ಬಿಜೆಪಿಯ ಅಂಗ ಸಂಸ್ಥೆಯಾ? ಎಂದು ಪ್ರಶ್ನಿಸಿದ್ದಾರೆ.

Tags: