Mysore
27
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ.

ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್‌ ಶಾ ಅವರು ಬಡೇ ಹನುಮಾನ್‌ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಲಿದ್ದಾರೆ.

ಇನ್ನು ಫೆಬ್ರವರಿ.5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಹ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.

ಇದುವರೆಗೂ ಮಹಾಕುಂಭಮೇಳದಲ್ಲಿ 20 ಕೋಟಿಗೂ ಅಧಿಕ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಮುಂದಿನ ತಿಂಗಳ ಶಿವರಾತ್ರಿವರೆಗೂ ಇನ್ನೂ ಕೋಟ್ಯಾಂತರ ಜನರು ಪವಿತ್ರ ಸ್ನಾನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಪವಿತ್ರ ಸ್ನಾನಕ್ಕೆ ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

 

 

Tags:
error: Content is protected !!