Mysore
28
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

ಮೈಕ್ರೋ ಫೈನಾನ್ಸ್‌ ಹಾವಳಿ ತಡೆಗೆ ಆಗ್ರಹಸಿ ಬೃಹತ್‌ ಪ್ರತಿಭಟನೆ

ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್‌ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿ ಧರಣಿ ನಡೆಸಿದ ಸಂಘಟನಕಾರರು ಮೈಕ್ರೋ ಫೈನಾನ್ಸ್‌ ಕಂಪನಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್‌ ಹಾಗೂ ದಸಂಸ ಮುಖಂಡರಾದ ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಕಿರುಕುಳ ಹೆಚ್ಚಾಗಿದೆ. ಇವರ ಕಿರುಕುಳಕ್ಕೆ ಎದರಿ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಒಂದೇ ರಾತ್ರಿ ಅಂಬಳೆ ಮತ್ತು ಮಲ್ಕುಂಡಿ ಗ್ರಾಮಗಳಲ್ಲಿ ಇಬ್ಬರೂ ಬಲಿಯಾಗಿದ್ದಾರೆ. ನಂಜನಗೂಡಿನ ತಹಶಿಲ್ದಾರ್‌ ಖಡಕ್‌ ಎಚ್ಚರಿಕೆ ನೀಡಿದರು ಈ ಫೈನಾನ್ಸ್‌ಗಳ ಹಾವಳಿ ಇನ್ನೂ ಹೆಚ್ಚಾಗಿದೆ ಎಂದು ದೂರಿದರು.

ಕೂಡಲೇ ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್‌ ಮಾಲೀಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಇವರ ಕಿರುಕುಳದಿಂದ ಜೀವ ಕಳೆದುಕೊಂಡಿರುವ ಕುಟುಂಬಗಳಿಗೆ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬೃಹತ್‌ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

 

Tags: