ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಗೆ ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಸೋಮವಾರ ಹಮ್ಮಿಕೊಂಡಿದ್ದ ಹೊಸ ಹಾದಿ ವೃತ್ತಿ ಮಾರ್ಗದರ್ಶನ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಎಲ್ಲಾ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
2021ರಲ್ಲಿ ಆರಂಭವಾದ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ವಿಘ್ನಗಳು ಎದುರಾಗಿತ್ತು. ಇದೀಗ ಎಲ್ಲಾವನ್ನು ಸರಿಪಡಿಸಿ ನೇಮಕಾತಿ ಆದೇಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕೌಶಲ ಕಲಿಕೆಗೆ ಆದ್ಯತೆ ನೀಡಲಾಗಿದ್ದು, ಹಲವು ಹೊಸ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ. ಹೊಸದಾಗಿ ನೇಮಕವಾದವರು ಗುಣಮಟ್ಟದ ಭೋಧನೆಯತ್ತ ಗಮನಹರಿಸಬೇಕು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ಎಲ್ಲಾ ನೂತನ ಸಹಾಯಕ ಪ್ರಾಧ್ಯಾಪಕರ ಶುಭ ಕೋರಿ, ಕೆಲವು ವಿಶೇಷ ಉಪನ್ಯಾಸ ನಡೆಸಲಾಯಿತು.
ಕಾರ್ಯಾಗಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಶ್ರೀಕರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್.ಮಂಜುಶ್ರೀ, ಆಡಳಿತಾಧಿಕಾರಿ ಶೋಭಾ ಉಪಸ್ಥಿತರಿದ್ದರು.