Mysore
22
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಮಂಡ್ಯ |  ಫೈನಾನ್ಸ್‌ ಕಿರುಕುಳಕ್ಕೆ ಯುವಕ ಆತ್ಮಹತ್ಯೆ 

ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಅವಿವಾಹಿತ ಯುವಕನೊಬ್ಬ ಜ.೨೫ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಳಗೆರೆಮೆಣಸ ಗ್ರಾಮದ ಲೋಹಿತ್‌ಕುಮಾರ್ (೩೫) ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಬೇಸಾಯ ಹಾಗೂ ಮನೆಯ ಖರ್ಚಿಗೆಂದು ಅಗ್ರಹಾರ ಬಾಚಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೫೦ ಸಾವಿರ ರೂ. ಸಾಲ ಹಾಗೂ ಪಟ್ಟಣದಲ್ಲಿರುವ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಲಕ್ಷಾಂತರ ರೂ. ಸಾಲ ಮಾಡಿದ್ದನು. ಜೊತೆಗೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದಲೂ ಕೈಸಾಲ ಮಾಡಿಕೊಂಡಿದ್ದನು.

Tags:
error: Content is protected !!