Mysore
29
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಗುಂಡ್ಲುಪೇಟೆ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ಮೃತಪಟ್ಟಿರುವವರು.

ಮಂಗಳವಾರ ಶಶಿಧರ್ ಪತ್ನಿ ಹಾಗೂ ತಾಯಿ ಜೊತೆ ಬೈಕ್ ನಲ್ಲಿ ಎಚ್. ಡಿ.ಕೋಟೆ ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿದ್ದರು. ಸಂಜೆ ವಾಪಸ್ ಗುಂಡ್ಲುಪೇಟೆ- ಮೈಸೂರು ಹೆದ್ದಾರಿ ಮಾರ್ಗವಾಗಿ ಕೂಡ್ಲಾಪುರಕ್ಕೆ ಬರುತ್ತಿದ್ದರು. ಹಿರೀಕಾಟಿ ಬಸ್ ನಿಲ್ದಾಣದ ಬಳಿ ಬೈಕ್ ಬರುತ್ತಿದ್ದಂತೆ ರಾತ್ರಿ 7.30 ಗಂಟೆ ಸಮಯದಲ್ಲಿ ನಂಜನಗೂಡು ಕಡೆಯಿಂದ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಓಡಿಸುತ್ತಿದ್ದ ಶಶಿಧರ್, ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ನೆಲಕ್ಕೆ ಬಿದ್ದರು. ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು.

ವಿಷಯ ತಿಳಿದು ಸ್ಥಳಕ್ಕೆ ಬೇಗೂರು ಪೊಲೀಸ್ ಠಾಣೆ ಎಸ್ .ಐ. ಚರಣ್ ಗೌಡ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ಬಳಿಕ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಿದರು. ಕಾರನ್ನು ವಶಕ್ಕೆ ಪಡೆದಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Tags:
error: Content is protected !!