Mysore
23
haze

Social Media

ಭಾನುವಾರ, 04 ಜನವರಿ 2026
Light
Dark

Union Budget 2025: ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಮುಂದಿನ ವಾರದಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.

ಸತತ 8ನೇ ಬಜೆಟ್‌ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮಂಡನೆಯಾದ ಮಧ್ಯಂತರ ಬಜೆಟ್‌ ವೇಳೆ ಆದಾಯ ತೆರಿಗೆ ಕಾಯ್ದೆ 1961ನ್ನು ಸಮಗ್ರ ಪರಿಶೀಲನೆಗೆ ಒಳಪಡಿಸುವಾಗಿ ನಿರ್ಮಲಾ ಸೀತಾರಾಮನ್‌ ಹೇಳಿದ್ದರು.

ಹೊಸ ಆದಾಯ ತೆರಿಗೆ ಮಸೂದೆಯನ್ನು ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಪ್ರಸ್ತುತ ಇರುವ ಆದಾಯ ತೆರಿಗೆ ಕಾಯ್ದೆ ಬದಲಿಗೆ ಎಲ್ಲರಿಗೂ ಅನುಕೂಲವಾಗುವಂತೆ ಸರಳೀಕರಣ ಮತ್ತು ಪುಟಗಳ ಸಂಖ್ಯೆ ಕಡಿಎ ಮಾಡಿ ಹೊಸ ಕಾಯ್ದೆ ಮಂಡನೆಯಾಗುವ ಸಾಧ್ಯತೆಗಳಿವೆ.

 

Tags:
error: Content is protected !!