Mysore
25
light rain

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಇಂದು ವಿತ್ತೆ ಸಚಿವ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ. ಈ ಬಜೆಟ್‌ನಿಂದ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಲೇವಡಿ ಮಾಡಿದ್ದಾರೆ.

ಬಜೆಟ್‌ ಬಗ್ಗೆ ಮಾತನಾಡಿರುವ ಅವರು, ಕೇಂದ್ರದ ಇಂದಿನ ಬಜೆಟ್‌ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್‌ನಿಂದ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ. ರಾಜ್ಯದ ಜನರ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ ಎಂದು ಕಿಡಿಕಾರಿದರು.

ಬಜೆಟ್‌ನಲ್ಲಿ ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ನೀಡಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಯಾವುದೇ ಯೊಜನೆಗಳಿಲ್ಲ. ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಜೆಟ್‌ ಪೂರ್ವ ಸಭೆಯಲ್ಲಿ ರಾಜ್ಯದ ಹಲವಾರು ಯೋಜನೆಗಳಿಗೆ ಅನುದಾನ ಕೋರಿದ್ದೆವು. ಆದರೆ ಏನು ನೀಡಿಲ್ಲ. ಬೆಂಗಳೂರು ನಗರ ಹೆಚ್ಚು ಉದ್ಯೋಗ ಅವಕಾಶ ನೀಡಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ನೀಡುತ್ತಿದೆ. ಆದರೆ ಬೆಂಗಳೂರಿಗೂ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಈ ನಡೆಯನ್ನು ಸರ್ಕಾರದ ಪರವಾಗಿ ನಾನು ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ಪರ ವಾಗ್ದಾಳಿ ನಡೆಸಿದರು.

Tags:
error: Content is protected !!