Mysore
19
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಸಮಾಜದ ಮುಖ್ಯವಾಹಿನಿಗೆ ಆಗಮಿಸಿದ ಮತ್ತೋರ್ವ ನಕ್ಸಲ್‌ ಲಕ್ಷ್ಮೀ ತೊಂಬಟ್ಟು

ಉಡುಪಿ: ಕಳೆದ 20 ವರ್ಷಗಳಿಂದ ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.

ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್‌ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ.

ಇಂದು ಪೊಲೀಸ್‌ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಇದ್ದರು.

ಬಳಿಕ ಎಸ್‌ಪಿ ಕೆ.ಅರುಣ್‌, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ ಅವರ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಿತು.

ನಕ್ಸಲ್‌ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ವಿಕ್ರಂಗೌಡ ಮೃತಪಟ್ಟಿದ್ದನು. ಇದೀಗ ಲಕ್ಷ್ಮಿ ತೊಂಬಟ್ಟು ಪೊಲೀಸರಿಗೆ ಶರಣಾಗಿದ್ದಾರೆ.

 

Tags:
error: Content is protected !!