Mysore
22
mist

Social Media

ಮಂಗಳವಾರ, 06 ಜನವರಿ 2026
Light
Dark

ಹಳೆ ತೆರಿಗೆ ಪದ್ದತಿ ರದ್ದುಪಡಿಸಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಹಳೆಯ ತೆರಿಗೆ ಪದ್ಧತಿಯನ್ನು ರದ್ದುಪಡಿಸುವ ಪ್ರಸ್ತಾಪವು ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌ ಅವರು, ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸಲು ಆದಾಯ ತೆರಿಗೆ ಕಡತಕ್ಕೆ ಕ್ರಮ ಕೈಗೊಂಡಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇಂತಹ ಟೀಕೆಗಳಿಗೆ ಅರ್ಥವೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, 2025-26ನೇ ಸಾಲಿನ ಬಜೆಟ್‌ನಲ್ಲಿ ಬಂಡವಾಳ ವೆಚ್ಚಕ್ಕೆ 11.21 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ಇದು ಒಟ್ಟು ಆಂತರಿಕ ಉತ್ಪನ್ನದ ಶೇಕಡಾ.4.3ರಷ್ಟಿದೆ. ಬಜೆಟ್‌ನಲ್ಲಿ ಬಂಡವಾಳ ವೆಚ್ಚವನ್ನು ಕಡಿತಗೊಳಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!