Mysore
20
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಬ್ಯಾಂಕ್‌ಗಳ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ಮಲ್ಯ

ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದು, ಈ ಸಂಬಂಧ ಇಂದು ಮಲ್ಯ ಪರ ವಕೀಲ ಸಜನ್‌ ಪೂವಯ್ಯ ವಾದ ಮಂಡಿಸಿದರು. ಈ ಸಂಬಂಧ ಕೋರ್ಟ್‌, ಬ್ಯಾಂಕುಗಳಿಗೆ ನೋಟಿಸ್‌ ಜಾರಿ ಮಾಡಿದೆ.

6200 ಕೋಟಿ ರೂಪಾಯಿ ಸಾಲ ಕೊಡಬೇಕಿತು. ಅದರಲ್ಲಿ 14,000 ಕೋಟಿ ರೂ ವಸೂಲಾಗಿದೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ವಕೀಲ ಸಜನ್‌ ಪೂವಯ್ಯ ಮನವಿ ಮಾಡಿದರು.

ಇನ್ನು ವಿಜಯ್‌ ಮಲ್ಯ ಪರ ವಕೀಲ ಸಜನ್‌ ಪೂವಯ್ಯ ಅವರ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಆರ್.‌ದೇವದಾಸ್‌ ಅವರಿದ್ದ ಪೀಠ, ಬ್ಯಾಂಕ್‌ಗಳು ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದ ಮುಂದಿನ ವಿಚಾರಣೆಯನ್ನು ಫೆಬ್ರವರಿ.19ಕ್ಕೆ ಮುಂದೂಡಿದರು.

 

Tags:
error: Content is protected !!