ನವದೆಹಲಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10 ರಿಂದ 18ರವರೆಗೆ ನಡೆಯಲಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ.
ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿದ್ದು, ಈ ಬಾರಿ ನೂತನ ಮಾದರಿಯಲ್ಲಿ ನಡೆಯುವ ಪರೀಕ್ಷೆ ಕುರಿತು ಚರ್ಚೆ ನಡೆಯಲಿದೆ. ಪರೀಕ್ಷೆ ಕುರಿತು ವಿದ್ಯಾರ್ಥಿಗಳ ಸಮಸ್ಯೆಯನ್ನು ಪ್ರಧಾನಿ ಮೋದಿ ಆಲಿಸಲಿದ್ದಾರೆ. ಅಲ್ಲದೇ ಶಿಕ್ಷಕರು ಮತ್ತು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಇನ್ನೂ ಫೆ.10 ರಿಂದ 18 ರವರೆಗೂ ನಡೆಯುವ ಪರೀಕ್ಷಾ ಪೇ ಕಾರ್ಯಕ್ರಮಕ್ಕೆ ಶಿಕ್ಷಣ ತಜ್ಞರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಇಶಾ ಫೌಂಡೇಶನ್‌ನ ಸದ್ಗುರು ಜಗ್ಗುವಾಸುದೇವ್ ಹಾಗೂ ಮಹಿಳಾ ಭಾಕ್ಸರ್ ಮೇರಿಕೋಮ್ ಸೇರಿದಂತೆ ಅನೇಕ ಗಣ್ಯರು ಆಗಮಿಸುವ ನಿರೀಕ್ಷೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.





