Mysore
32
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ವಾಲ್ಮೀಕಿ ಹಗರಣ: ತನಿಖೆ ಚುರುಕುಗೊಳಿಸಿದ ಸಿಬಿಐ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್‌ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್‌ ನೀಡಿದೆ. ಈ ಹಿಂದೆ ಚಂದ್ರಮೋಹನ್‌ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್‌ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.

ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್‌, ಸತ್ಯನಾರಾಯಣ ಇಟಕಾರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸುತ್ತಿದೆ.

 

Tags:
error: Content is protected !!