Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಯುವಜನತೆಯ ಹಠಾತ್‌ ಸಾವು; ತನಿಖೆಗೆ ತಜ್ಞರ ಸಮಿತಿ: ಸಿಎಂ ಸಿದ್ದಾರಾಮಯ್ಯ

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಯುವಜನರೇ ಹಠಾತ್‌ ಹೃದಯಘಾತ, ಮೆದುಳು ಸಂಬಂಧಿ ಇನ್ನಿತರ ಕಾರಣಗಳಿಗೆ ಸಾವಿಗೀಡಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಲು ಮುಂದಾಗಿದೆ.

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ತಜ್ಞರ ಸಮಿತಿ ರಚಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ರಾಜಾರಾಂ ತಲ್ಲೂರು, ತಮ್ಮ ಇ-ಮೇಲ್ ಮೂಲಕ, ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿದ್ದಾರೆ.

ಆದ್ದರಿಂದ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ. ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

Tags:
error: Content is protected !!