Mysore
18
few clouds

Social Media

ಮಂಗಳವಾರ, 13 ಜನವರಿ 2026
Light
Dark

ಜೀವನೋಪಯಕ್ಕೆ ಕೌಶಲ್ಯ ತರಬೇತಿ ಮುಖ್ಯ: ಚಲುವರಾಯಸ್ವಾಮಿ

ಮಂಡ್ಯ: ಜೀವನೋಪಯಕ್ಕೆ ಕೌಶಲ್ಯ ತರಬೇತಿ ಪಡೆದು ತರಬೇತಿಗಳ ಸದುಪಯೋಗ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು.

ಇಂದು (ಫೆ.07) ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಮಂಡ್ಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಡ್ಯ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದರು.

ಕೌಶಲ್ಯ ತರಬೇತಿ ಪಡೆದರೆ ನಿಮ್ಮ ಜೀವನದಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಬಹುದು, ಇದರಿಂದ ಜೀವನ ನಿರ್ವಹಣೆಗೆ ಅನುಕೂಲಕರವಾಗಲಿದೆ, ಉದ್ಯೋಗ ದೊರಕುವ ಆತ್ಮ ವಿಶ್ವಾಸ ಹೆಚ್ಚಾಗಲಿದೆ, ಇಂತಹ ತರಬೇತಿಯಿಂದ ಸಂದರ್ಶನಗಳನ್ನು ಯಾವ ರೀತಿ ಎದುರಿಸುವುದು ಎಂದು ತಿಳಿಯಲಿದೆ ಎಂದು ತಿಳಿಸಿದರು.

ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯ. ಸರ್ಕಾರ, ಖಾಸಗಿ ಸಂಸ್ಥೆಗಳು ಹಾಗೂ ಮಠಗಳು ಶಿಕ್ಷಣ ನೀಡುತ್ತಿವೆ. ವಿದ್ಯೆಯ ಜೊತೆಗೆ ಬುದ್ದಿ ಮತ್ತು ಜ್ಞಾನ ಬೆಳಿಸಿಕೊಂಡು ಸ್ವಯಂ ಉದ್ಯೋಗ ಮಾಡಲು ನೀವು ಮುಂದೆ ಬರಬೇಕು, ಇಂದು ಸ್ವಯಂ ಉದ್ಯೋಗ ಮಾಡಲು ಸರ್ಕಾರದಲ್ಲಿ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು ಅದನ್ನು ಸದುಪಯೋಗಪಡೆಸಿಕೊಳ್ಳುವಂತೆ ತಿಳಿಸಿದರು.

ಡಿಸೆಂಬರ್ ಮಾಹೆಯ ಒಳಗೆ ಏಳು ತಾಲೂಕಿನ ನಿರುದ್ಯೋಗಿಗಳಿಗೆ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಏರ್ಪಡಿಸಲು ಉದ್ದೇಶಿಸಲಾಗಿದೆ, ಉದ್ಯೋಗ ಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 400 ಕ್ಕೂ ಹೆಚ್ಚು ನಿರುದ್ಯೋಗಿಗಳು ನೊಂದಾಯಿಸಿಕೊಂಡಿದ್ದಾರೆ ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಪಿ.ರವಿಕುಮಾರ್, ಮಂಡ್ಯ ವಿಶ್ವವಿದ್ಯಾಲಯದ ಉಪ ಕುಲಪತಿ ಶಿವಚಿತ್ತಪ್ಪ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಾಗೂ ಇತರರು ಉಪಸ್ಥಿತರಿದ್ದರು.

Tags:
error: Content is protected !!