ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಪಕ್ಷವು ಮ್ಯಾಜಿಕ್ ನಂಬರ್ ದಾಟಿದೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 19 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆಪ್‌ನ ಘಟಾನುಘಟಿ ನಾಯಕರು ಕೂಡ ಹಿನ್ನಡೆ ಅನುಭವಿಸಿದ್ದಾರೆ.
ಮಧ್ಯಾಹ್ನ 12 ಗಂಟೆಯ ವೇಳೆಗೆ ದೆಹಲಿಯಲ್ಲಿ ಗದ್ದುಗೆ ಏರೋದು ಯಾರು ಎಂದು ಗೊತ್ತಾಗಲಿದೆ.
ಇನ್ನು ದೆಹಲಿಯಲ್ಲಿ ಬಿಜೆಪಿಯು ಅರ್ಧಶತಕ ಬಾರಿಸಿದ್ದು, 27 ವರ್ಷಗಳ ಬಳಿಕ ದಾಖಲೆ ಬರೆಯಲಿದೆ ಎಂದು ಹೇಳಲಾಗುತ್ತಿದೆ.