Mysore
28
scattered clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಮೈಸೂರಿನಲ್ಲಿ ರಾತ್ರೋರಾತ್ರಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು ಸೂಚನೆ ನೀಡಿದಾಗ, ಒಕ್ಕಲಿಗ ಸಂಘದ ಸದಸ್ಯರು ಅದು ಒಪ್ಪಿಗೆ ಪಡೆದು ನಿರ್ಮಾಣ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಕಳೆದ ಮೂರು ವರ್ಷಗಳಿಂದ ಯತ್ನಗಳು ನಡೆದಿದ್ದರೂ, ಶಾಸಕರು ಸಮಯ ತೆಗೆದುಕೊಂಡರೂ ಅನುಮತಿ ದೊರಕಲಿಲ್ಲ. ಈಗ ಅಂತಿಮವಾಗಿ, ಸ್ಥಳೀಯರು ಕಳೆದ ತಡರಾತ್ರಿ ತಮ್ಮದೇ ಆದ ನಿರ್ಧಾರದಿಂದ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Tags:
error: Content is protected !!