ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸೋಲಿಗೆ ಕಾಂಗ್ರೆಸ್ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿ ಭಾರೀ ಅಂತರದ ಗೆಲುವಿನತ್ತ ದಾಪುಗಾಲಿರಿಸಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ದೆಹಲಿ ಜನತೆ ಶಾಕ್ ನೀಡಿದ್ದು, ಇಬ್ಬರು ನಾಯಕರು ಸೋಲು ಕಂಡಿದ್ದಾರೆ.
ಇನ್ನು ದೆಹಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಎಎಪಿ ಸೋಲಿಗೆ ಕಾಂಗ್ರೆಸ್ ಕಾರಣ ಎಂಬ ಟೀಕೆಗಳು ಉದ್ಬವವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ.
ಎಎಪಿ ಸೋಲಿಗೆ ನಾವು ಜವಾಬ್ದಾರರಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಹೇಳಿದೆ.
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟಿ ಅವರು, ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವುದು ಕಾಂಗ್ರೆಸ್‌ನ ಜವಾಬ್ದಾರಿಯಲ್ಲ. ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರಸ್‌ನ ಮೇಲಿಲ್ಲ. ನಾವು ಫಲವತ್ತಾದ ರಾಜಕೀಯ ಭದ್ರಕೋಟೆಗಳನ್ನು ಹುಡುಕುತ್ತೇವೆ. ಇವುಗಳನ್ನು ಗೆಲ್ಲಲು ಬಯಸುತ್ತೇವೆ. ಇಲ್ಲಿ ಯಾವುದೇ ಪಕ್ಷದ ಮೇಲೂ ಕಾಂಗ್ರೆಸ್ ಅವಲಂಬಿತವಾಗಿಲ್ಲ ಎಂದು ಹೇಳಿದರು.





