Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಸೋಲಿನ ಬಳಿಕ ಅರವಿಂದ್‌ ಕೇಜ್ರಿವಾಲ್‌ ಮೊದಲ ಪ್ರತಿಕ್ರಿಯೆ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನವಾಗಿದೆ.

ಈ ಬಗ್ಗೆ ಮೊದಲ ಬಾರಿಗೆ ಎಎಪಿ ಮುಖ್ಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಮಾತನಾಡಿದ್ದು, ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

ಹೀನಾಯ ಸೋಲಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಜನಾದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ. ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಜನರು ಅವರಿಗೆ ಮತ ಹಾಕಿದ ಎಲ್ಲಾ ಭರವಸೆಯನ್ನು ಅವರು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಅಂತೆಯೇ, ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಈ ಚುನಾವಣಾ ಫಲಿತಾಂಶವನ್ನು ನಾವು ನಿರೀಕ್ಷಿಸಿರಲಿಲ್ಲ. ತಮ್ಮ ಪಕ್ಷವು ಎಂದಿಗೂ ಅಧಿಕಾರಕ್ಕಾಗಿ ರಾಜಕೀಯದಲ್ಲಿರಲಿಲ್ಲ. ಜನರ ಸೇವೆಯೇ ನಮ್ಮ ಪಕ್ಷದ ಮುಖ್ಯ ಧ್ಯೇಯೋದ್ದೇಶವಾಗಿತ್ತು. ಜನರಿಗೆ ಸೇವೆ ಸಲ್ಲಿಸುವುದನ್ನು ನಮ್ಮ ಪಕ್ಷ ಮುಂದುವರಿಸುತ್ತದೆ. ರಚನಾತ್ಮಕ ವಿರೋಧ ಪಕ್ಷದ ಪಾತ್ರವನ್ನು ವಹಿಸುವುದಲ್ಲದೇ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

 

Tags:
error: Content is protected !!