Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮಣಿಪುರ: ಸಿಎಂ ಸ್ಥಾನಕ್ಕೆ ಬಿರೇನ್‌ ಸಿಂಗ್‌ ರಾಜೀನಾಮೆ

ಇಂಪಾಲ: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಬಗೆಹರಿಸಲು ಮಣಿಪುರದ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ದಿಢೀರ್‌ ರಾಜೀನಾಮೆ ನೀಡಿದ್ದಾರೆ.

ಇಂದು (ಫೆ.9) ಸಂಜೆ ಸಿಎಂ ಬಿರೇನ್‌ ಸಿಂಗ್‌, ರಾಜ್ಯಪಾಲರಾದ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ  ರಾಜೀನಾಮೆ ಹಸ್ತಾಂತರಿಸಿದ್ದಾರೆ.

ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ ನಂತರ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುಮಾರು 12 ಶಾಸಕರು ಸಿಎಂ ಬದಲಾವಣೆಗಾಗಿ ಒತ್ತಾಯ ಮಾಡುತ್ತಿದ್ದು, 6 ಶಾಸಕರು ಬೇರೆ ಪಕ್ಷಗಳಿಗೆ ಪಕ್ಷಾಂತರವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags:
error: Content is protected !!