ಶಿವಮೊಗ್ಗ: ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿ ಇತ್ತೀಚಿಗೆ ಶರಣಾಗಿದ್ದ ಮುಂಡಗಾರು ಲತಾ ಮತ್ತು ವನಜಾಕ್ಷಿ ಎಂಬ ಇಬ್ಬರು ನಕ್ಸಲರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು (ಫೆ.10) ಪೊಲೀಸರು ಇಬ್ಬರು ನಕ್ಸಲರನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಗೀತಾಮಣಿ ಅವರು ಈ ಆದೇಶ ಹೊರಡಿಸಿದ್ದಾರೆ.
ನಾಗರೀಕ ಸಮಾಜದಲ್ಲಿ ಜೀವಿಸುವ ಉದ್ದೇಶದಿಂದ ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಸುಮಾರು 6 ನಕ್ಸಲರು ಶರಣಾಗಿದ್ದರು.
ಮುಂಡಗರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.





